ಶಿವಮೊಗ್ಗ, ನ. 09 (DaijiworldNews/SM): ಕೊರೋನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಂತರ್ಜಾಲ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಅಡ್ಡಿಯಾಗಿದೆ. ಈ ಬಗ್ಗೆ ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.