ನವದೆಹಲಿ, ನ.12 (DaijiworldNews/HR): ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ.

ಸುರೇಂದ್ರ ಸಿಂಗ್ ಅವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಇನ್ನು ಸುರೇಂದ್ರ ಸಿಂಗ್ ಅವರು ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.