ಬೆಂಗಳೂರು,ಡಿ.14(DaijiworldNews/HR): ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆಯುವ ಹಾದಿಯಲ್ಲಿದ್ದು, ಇದೀಗ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ಇಬ್ರಾಹಿಂ ಭೇಟಿ ನೀಡಿದ್ದು, ಕೆಲಕಾಲ ಚರ್ಚೆ ನಡೆಸಿದ್ದಾರೆ.
ಈ ಸಂಧರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಆರ್. ಮಂಜುನಾಥ್, ಮಾಜಿ ಶಾಸಕ ಸುರೇಶ್ ಬಾಬು ಉಪಸ್ಥಿತರಿದ್ದರು.
ಇನ್ನು ಜೆಡಿಎಸ್ ಸೇರಲು ಇಬ್ರಾಹಿಂ ಮುಂದಾಗಿದ್ದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆಂದು ತಿಳಿದು ಬಂದಿದೆ.