ಮುಂಬೈ, ,27 (DaijiworldNews/AK): ಇಂದು ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ ತಂಡ 12 ಪಾಯಿಂಟ್ಸ್ನೊಂದಿಗೆ ತೃತೀಯ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಲಿದೆ.
ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಅಲ್ಲದೆ ಮುಂದಿನ 4 ಮ್ಯಾಚ್ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.