ಬೆಂಗಳೂರು, ಜೂ. 08 (DaijiworldNews/AA): ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟಕ್ಕೆ ಏರಿದೆ. ಆದರೆ ಎರಡು ವರ್ಷಗಳ ಹಿಂದೆ ಆರ್ಸಿಬಿ ತಂಡದಲ್ಲಿದ್ದ ಬೌಲರ್ವೊಬ್ಬರು ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ 2025 ರಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಅಚ್ಚರಿ ಮೂಡಿಸಿದ್ದಾರೆ.

ಭಾರತದ ಯುವ ವೇಗದ ಬೌಲರ್ ಸೋನು ಯಾದವ್ ಅವರು ಎರಡು ವರ್ಷಗಳ ಹಿಂದೆ ಆರ್ಸಿಬಿ ತಂಡದಲ್ಲಿದ್ದರು. ಆದರೆ ಆರ್ಸಿಬಿ ತಂಡದಲ್ಲಿದ್ದರೂ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಆಡಲು ಅವಕಾಶ ದೊರೆತಿರಲಿಲ್ಲ. ಇದಾದ ನಂತರ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ ಇದೀಗ ಅವರು ಟಿಎನ್ಪಿಎಲ್ನಲ್ಲಿ ಹ್ಯಾಟ್ರಿಕ್ ಪಡೆದು ಸಾಧನೆ ಮಾಡಿದ್ದಾರೆ.
ಟಿಎನ್ಪಿಎಲ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಪುಟದಲ್ಲಿ ಸೋನು ಯಾದವ್ ಅವರು ಹ್ಯಾಟ್ರಿಕ್ ಪಡೆದ ವೀಡಿಯೊವನ್ನು ಹಂಚಿಕೊಂಡಿದೆ. ಈ ಮೂಲಕ ಟಿಎನ್ಪಿಎಲ್ನಲ್ಲಿ ಹ್ಯಾಟ್ರಿಕ್ ಪಡೆದ ಆರನೇ ಆಟಗಾರ ಎಂದೆನಿಸಿಕೊಂಡಿದ್ದಾರೆ.
ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಆಲ್ರೌಂಡರ್ ಸೋನು ಯಾದವ್ ತ್ರಿಚಿ ಗ್ರ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ ಬೌಲ್ ಮಾಡಿ ಈ ಓವರ್ನ ಮೂರನೇ, ನಾಲ್ಕನೇ ಮತ್ತು ಐದನೇ ಎಸೆತಗಳಲ್ಲಿ ವಿಕೆಟ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಈ ಪಂದ್ಯದಲ್ಲಿ ಸೋನು ಯಾದವ್ 3 ಓವರ್ಗಳಲ್ಲಿ 22 ರನ್ಗಳನ್ನು ನೀಡಿ ಮೂರು ವಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ.