ಕಾರ್ಕಳ, ಸೆ. 01 (DaijiworldNews/AA): ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮದ ಪ್ರಾಥಮಿಕ ಶಾಲಾ ಬಾಲಕರ ತಂಡ ಆಯ್ಕೆಯಾಗಿದೆ.

ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಗಳಿಸಿ ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದೆ.
ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ನಾಯಕ್ ತರಬೇತಿ ನೀಡಿದ್ದರು.