ಬೆಂಗಳೂರು, ಜ. 21 (DaijiworldNews/AA): ಬೆಂಗಳೂರಿನಲ್ಲಿ ಮತ್ತೆ ಐಪಿಎಲ್ ಪಂದ್ಯ ಆಡಿಸಲು ಸಿದ್ಧರಿದ್ದೇವೆ. ಆದ್ರೆ ಆರ್ಸಿಬಿ ಮ್ಯಾನೇಜ್ಮೆಂಟ್ ಅಷ್ಟು ಒಲವು ತೋರಿಸುತ್ತಿಲ್ಲ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಿನ್ನಸ್ವಾಮಿಯಲ್ಲಿ ಐಪಿಎಲ್ ಆಡಿಸಲು ರೆಡಿ ಇದ್ರು ಆರ್ಸಿಬಿ ಮ್ಯಾನೇಜ್ಮೆಂಟ್ ಒಲವು ತೋರಿಸುತ್ತಿಲ್ಲ. ಹೀಗಾಗಿ ಇಲ್ಲಿನ ಕ್ರಿಕೆಟ್ ಅಭಿಮಾನಿಗಳಿಗಾಗಿ ನೀವೂ ಇಲ್ಲಿ ಆಡಬೇಕು ಎಂದು ಆರ್ಸಿಬಿ ಮ್ಯಾನೇಜ್ಮೆಂಟ್ ಬಳಿ ಮನವಿ ಮಾಡುತ್ತಿದ್ದೇವೆ. ಅಲ್ಲದೆ ನಿಮಗೆ ಏನೇ ಸಂಶಯಗಳಿದ್ರು ಸರ್ಕಾರದ ಜೊತೆ ಮಾತನಾಡಿ ಎಂಬ ಸಲಹೆಯನ್ನು ನೀಡಿದ್ದೇವೆ. ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ ತನ್ನ ಪಂದ್ಯಗಳನ್ನು ಆಡಬೇಕು ಅನ್ನೋದು ನಮ್ಮ ಆಶಯ" ಎಂದು ಮಾಹಿತಿ ನೀಡಿದರು.
"ಆದಷ್ಟು ಬೇಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜಿಸುತ್ತೇವೆ. ಅಂತಾರಾಷ್ಟ್ರೀಯ, ಐಪಿಎಲ್ ಪಂದ್ಯಗಳನ್ನು ಮತ್ತೆ ಬೆಂಗಳೂರಿಗೆ ತರುತ್ತೇವೆ. ಕರ್ನಾಟಕ ಸರ್ಕಾರ ನಮ್ಮ ಜೊತೆಗಿದೆ. ನಾವೂ ಸರ್ಕಾರದ ಇಲಾಖೆಗಳಿಗೆ ಮನವೊಲಿಸುತ್ತೇವೆ. ಜಿಬಿಎ, ಬೆಸ್ಕಾಂ, ಜಲಮಂಡಳಿ ಪೊಲೀಸ್ ಎಲ್ಲರ ವಿಶ್ವಾಸ ಗಿಟ್ಟಿಸುವ ಭರವಸೆ ಇದೆ. ಎಲ್ಲವನ್ನು ಕೂಡಲೇ ಮಾಡುವುದು ಅಷ್ಟು ಸುಲಭವಲ್ಲ. ಆದ್ರೆ ನಾವು ಮ್ಯಾನೇಜ್ ಮಾಡುತ್ತೇವೆ. ಆ ಕೆಲಸವನ್ನು ನಮ್ಮ ಕಮಿಟಿ ಮಾಡಲಿದೆ. ನಾವು ಕ್ರಿಕೆಟ್ ಅಭಿಮಾನಿಗಳಿಗೆ ಮಾತು ಕೊಡುತ್ತಿದ್ದೇವೆ. ಮತ್ತೇ ಚಿನ್ನಸ್ವಾಮಿ ಯಲ್ಲಿ ಪದ್ಯಗಳನ್ನು ಆದಷ್ಟು ಬೇಗ ಆಯೋಜಿಸುತ್ತೇವೆ" ಎಂದು ಹೇಳಿದರು.