ಬುಲವಾಯೊ, ಫೆ. 01 (DaijiworldNews/AA): U19 ವಿಶ್ವಕಪ್ ಟೂರ್ನಿಯ ನಿರ್ಣಾಯಕ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ U19 ತಂಡ 58 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.

ಪಾಕಿಸ್ತಾನಕ್ಕೆ 253 ರನ್ ಗಳ ಗುರಿಯನ್ನ ಭಾರತ ತಂಡ ನೀಡಿತ್ತು. ಈ ಗುರಿಯನ್ನ ಬೆನ್ನಟ್ಟಿದ ಪಾಕ್ 46.2 ಓವರ್ಗಳಲ್ಲಿ 194 ರನ್ ಗಳಿಸಿ ಆಲ್ಔಟ್ ಆಯಿತು. ಈ ಮೂಲಕ ಪಾಕ್ ತಂಡ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ.
ಇನ್ನು ಭಾರತದ ವಿರುದ್ಧ ಸೋಲನ್ನು ಅನುಭವಿಸಿದ ಬಳಿಕ ಪಾಕ್ ಕ್ರಿಕೆಟಿಗ ಮೈದಾನದಲ್ಲೇ ಕಣ್ಣೀರಿಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೆ.4 ರಂದು ನಡೆಯುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ ಸೆಣೆಸಾಡಲಿದೆ.