ಇಸ್ಲಾಮಾಬಾದ್/ಕೊಲಂಬೊ: ಫೆ. 10 (DaijiworldNews/AK): ಇದೇ ಫೆಬ್ರವರಿ 15 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಆಡಳಿತ ಮಂಡಳಿ ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೊಸ ಬೆಳವಣಿಗೆ ಕಂಡುಬಂದಿದೆ.
ಫೆ.15 ರ ಭಾನುವಾರ ಕೊಲಂಬೊದಲ್ಲಿ ಭಾರತದ ವಿರುದ್ಧ ಪಾಕ್ ಕಣಕ್ಕಿಳಿಯೋದು ಫೀಕ್ಸ್ ಆಗಿದೆ ಎಂದು ಹೇಳಲ್ತಾಗಿದೆ. ಇದಕ್ಕೆ ಪಾಕ್ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆ ಇನ್ನೂ ಬಾಕಿಯಿದೆ.
ಉನ್ನತ ಮೂಲಗಳ ಪ್ರಕಾರ, ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಮ್ಮಿ ಸಿಲ್ವಾ, ಯುಎಇ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ವಿಶೇಷ ವಿನಂತಿ ಮಾಡಿದ ಬಳಿಕ, ಪಾಕಿಸ್ತಾನವು ಭಾರತದ ವಿರುದ್ಧ ಆಡಲು ಒಪ್ಪಿಕೊಂಡಿದೆ. ಪಾಕಿಸ್ತಾನ ಪ್ರಧಾನಿ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರೊಂದಿಗೆ ಸಭೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಧೀಕೃತ ನಿರ್ಧಾರ ಹೊರಬೀಳಲಿದೆ ಎಂದು ವರದಿಗಳು ತಿಳಿಸಿವೆ.