ಅಹಮದಾಬಾದ್, ಏ. 30 (DaijiworldNews/AA): ಐಪಿಎಲ್ 2026 ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಗುಜರಾತ್ ಟೈಟಾನ್ಸ್(ಜಿಟಿ) ನಡುವೆ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಗುಜರಾಜ್ ವಿರುದ್ಧ ಗೆಲುವು ಸಾಧಿಸಿತ್ತು. ಆರ್ಸಿಬಿ ಆರು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗುಜರಾತ್ ನಾಲ್ಕು ಗೆಲುವುಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಒಂದು ವೇಲೆ ಇಂದು ಆರ್ಸಿಬಿ ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುತ್ತದೆ.
ಇಂದಿನ ಆರ್ಸಿಬಿ ಪಂದ್ಯಕ್ಕೆ ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ ಅವರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿಯಲಿದ್ದಾರೆ. ಕಳೆದ ವಾರ ನಡೆದ ಅಭ್ಯಾಸದ ಅವಧಿಯಲ್ಲಿ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದ ಅವರು ಏಪ್ರಿಲ್ 24 ರಂದು ನಡೆದ ಗುಜರಾತ್ ಟೈಟಾನ್ಸ್ ಪಂದ್ಯದಿಂದ ಮತ್ತು ಏಪ್ರಿಲ್ 27 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.