ಮುಂಬೈ, ಮೇ. 08 (DaijiworldNews/AA): ಟೀಂ ಇಂಡಿಯಾದ ಟಿ೨೦ ನಾಯಕ ಸೂರ್ಯ ಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ವಿಚಾರವನ್ನು ಸೂರ್ಯ ಕುಮಾರ್ ಯಾದವ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಜೋಡಿ 2016 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 10 ವರ್ಷಗಳ ನಂತರ ಈ ದಂಪತಿ ಪೋಷಕರಾಗಿದ್ದಾರೆ. ಇದೀಗ ಈ ದಂಪತಿಗೆ ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.