ಧರ್ಮಶಾಲಾ, ಮೇ. 12 (DaijiworldNews/AA): ತಂಡದ ಗೆಲುವಿನ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ಗೆ ಐಪಿಎಲ್ ಆಡಳಿತ ಮಂಡಳಿಯು 12 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಪಂದ್ಯದ ವೇಳೆ ನಿಗದಿತ ಸಮಯಕ್ಕೆ ಓವರ್ಗಳನ್ನು ಪೂರ್ಣಗೊಳಿಸದ ಹಿನ್ನೆಲೆ ನಾಯಕ ಅಕ್ಷರ್ ಪಟೇಲ್ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಇದು ಈ ಸೀಸನ್ನಲ್ಲಿ ಡೆಲ್ಲಿ ತಂಡದ ಮೊದಲ ತಪ್ಪಾಗಿದೆ. ಹೀಗಾಗಿ ಕೇವಲ ತಂಡದ ನಾಯಕನಿಗೆ ಮಾತ್ರ ದಂಡ ವಿಧಿಸಲಾಗಿದೆ.