ಧರ್ಮಶಾಲಾ, ಮೇ. 17 (DaijiworldNews/AA): ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ ಪ್ಲೇ ಆಫ್ಗೆ ಅರ್ಹತೆ ಪಡೆದಿದೆ.

ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 199 ರನ್ ಗಳಿಸುವಲ್ಲಿ ಶಕ್ತವಾಯಿತು.
ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಆರ್ಸಿಬಿ ಪ್ಲೇಆಫ್ ಟಿಕೆಟ್ ಖಚಿತಪಡಿಸಿಕೊಂಡಿತು. ಇನ್ನು ಸೋತ ಪಂಜಾಬ್ ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣ ಮಾಡಿಕೊಂಡಿತು.
ಜಾಕೋಬ್ ಬೆಥೆಲ್ 7 ಎಸೆತಗಳಲ್ಲಿ 11 ರನ್, ವಿರಾಟ್ ಕೊಹ್ಲಿ 37 ಎಸೆತಗಳಲ್ಲಿ 58 ರನ್, ದೇವದತ್ ಪಡಿಕ್ಕಲ್ 25 ಎಸೆತಗಳಲ್ಲಿ 45 ರನ್, ವೆಂಕಟೇಶ್ ಅಯ್ಯರ್ 40 ಎಸೆತಗಳಲ್ಲಿ 73 ರನ್ ಹಾಗೂ ಟಿಮ್ ಡೇವಿಡ್ 12 ಎಸೆತಗಳಲ್ಲಿ 28 ರನ್ ಗಳಿಸುವ ಮೂಲಕ 222 ರನ್ ಗಳಿಸಿತು.
ಇನ್ನು ಬೌಲಿಂಗ್ ನಲ್ಲಿ ರಸಿಕ್ ಸಲಾಂ 3 ವಿಕೆಟ್ ಗಳಿಸಿದರೆ, ಭುವನೇಶ್ವರ್ ಕುಮಾರ್ 2 ವಿಕೆಟ್, ಜೋಶ್ ಹ್ಯಾಜಲ್ವುಡ್, ಸುಯೇಶ್ ಶರ್ಮಾ ಹಾಗೂ ರೊಮಾರಿಯೋ ಶೆಫರ್ಡ್ ತಲಾ 1 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.