ಕೋಲ್ಕತ್ತಾ, ಜು. 19 (DaijiworldNews/AA): ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಆರೋಪದಡಿಯಲ್ಲಿ ಭಾರತದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.

ಕಳೆದ ತಿಂಗಳಷ್ಟೇ, ಮಹಿಳೆಯೊಬ್ಬರು, ಅಭಿಷೇಕ್ ಪೊರೆಲ್ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದು, ಮದುವೆಯ ಸುಳ್ಳು ಭರವಸೆ ನೀಡಿ ಅಭಿಷೇಕ್ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಇದೀಗ ಮದುವೆಯಾಗುವಂತೆ ಕೇಳಲು ಹೋದರೆ ಅಭಿಷೇಕ್ ನನ್ನ ಮೇಲೆ ಹಲ್ಲೆ ಮಾಡಿದ್ದು, ಬೆದರಿಕೆಯನ್ನು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೋಗ್ರಾ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ಪೊರೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಚಾರಣೆಯ ವೇಳೆ, ಅಭಿಷೇಕ್ ಅವರನ್ನು ಬಂಧಿಸಲು, ಅವರ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳು ಮತ್ತು ಸಾಧನಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ.