ಕಾಬೂಲ್, ಸೆ. 05 (DaijiworldNews/AA): ಟಿ20 ಕ್ರಿಕೆಟ್ನಲ್ಲಿ 7,000 ರನ್ ಪೂರೈಸಿಸುವ ಮೂಲಕ ಅಫ್ಘಾನಿಸ್ತಾನ್ ತಂಡದ ಸ್ಫೋಟಕ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ಅವರು ಪಾಕಿಸ್ತಾನ್ ತಂಡದ ಬಾಬರ್ ಆಝಂ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಕೆರಿಬಿಯನ್ ಪ್ರೀಮಿಯರ್ ಲೀಗ್ನ 26ನೇ ಪಂದ್ಯದಲ್ಲಿ ಜಮೈಕಾ ಕಿಂಗ್ಸ್ಮೆನ್ ವಿರುದ್ಧ ಗಯಾನಾ ಅಮೆಝಾನ್ ವಾರಿಯರ್ಸ್ ಪರ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಝ್ ಕೇವಲ 35 ಎಸೆತಗಳಲ್ಲಿ 54 ರನ್ ಗಳಿಸಿದ್ದಾರೆ. ಈ 54 ರನ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ 7,000 ರನ್ ಪೂರೈಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಟಿ20 ಕ್ರಿಕೆಟ್ ಇತಿಹಾಸದಲ್ಲೇ 7,000 ರನ್ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗುರ್ಬಾಝ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ ಹೆಸರಿನಲ್ಲಿತ್ತು. ಇದೀಗ ಕೇವಲ 24ನೇ ವಯಸ್ಸಿಗೆ ಗುರ್ಬಾಝ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ 7,000 ರನ್ ಗಳಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.