ನಗೋಯಾ, ಅ.19 (DaijiworldNews/AA): 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಮೋನಾ ಅಗರ್ವಾಲ್ ಅವರು ಚಿನ್ನದ ಪದಕವನ್ನು ಅವನಿ ಲೇಖರಾ ಅವರು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತ ತನ್ನ ಖಾತೆಯನ್ನು ತೆರೆದಿದೆ.

ಐಚಿ-ನಗೋಯಾದಲ್ಲಿ ನಡೆಯುತ್ತಿರುವ 5ನೇ ಏಷ್ಯನ್ ಪ್ಯಾರಾ ಗೇಮ್ಸ್ನ 10 ಮೀಟರ್ ಏರ್ ರೈಫಲ್ ವಿಭಾಗದ ಅರ್ಹತಾ ಸುತ್ತಿನಲ್ಲಿ ಭಾರತದ ಮೋನಾ ಅಗರ್ವಾಲ್ ಮತ್ತು ಅವನಿ ಲೇಖರಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಮೋನಾ ಅಗರ್ವಾಲ್ ಮತ್ತು ಅವನಿ ಲೇಖರಾ ಅವರು ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನಗಳನ್ನು ಪಡೆಯುವ ಮೂಲಕ ಭಾರತಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನು ತಂದುಕೊಟ್ಟಿದ್ದಾರೆ.
ಅಂತಿಮ ಹಂತದಲ್ಲಿ ಮೋನಾ ಅವರು ಅಂಕಟ್ಟಿಯಲ್ಲಿ 629.1 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡರೆ, ಅವನಿ ಲೇಖರಾ ಅವರು 629.4 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು. ಮೋನಾ ಅವರು ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಚೀನಾದ ಜಾಂಗ್ ಕ್ಯೂಪಿಂಗ್ ಅವರ ಹೆಸರಲ್ಲಿದ್ದ ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ.