ಕಾಸರಗೋಡು, ಅ.19 (DaijiworldNews/TA) : ಕಾಸರಗೋಡು ಜಿಲ್ಲಾ ಸ್ಪೋರ್ಟ್ಸ್ ಮೀಟ್–2026ರ ಸೀನಿಯರ್ ಗರ್ಲ್ಸ್ ವಿಭಾಗದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಬಾಕ್ರಬೈಲಿನ ವೈಷ್ಣವಿ ಎಚ್. ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ವೈಷ್ಣವಿ ಅವರು ಕುಂಬಳೆ ಜಿ.ಎಚ್.ಎಸ್.ಎಸ್. ಶಾಲೆಯಲ್ಲಿ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಬಾಕ್ರಬೈಲಿನ ಶಕೀಲಾ ಮತ್ತು ಹರೀಶ್ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಅವರು, ದೈಹಿಕ ಶಿಕ್ಷಣ ಶಿಕ್ಷಕ ರಾಹುಲ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೈಷ್ಣವಿ, ಪ್ರಥಮ ಸ್ಥಾನ ಪಡೆಯುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ. ಈ ಸಾಧನೆಯೊಂದಿಗೆ ರಾಜ್ಯಮಟ್ಟದಲ್ಲಿ ಕಾಸರಗೋಡು ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶವನ್ನೂ ಪಡೆದುಕೊಂಡಿದ್ದಾರೆ. ವೈಷ್ಣವಿ ಅವರ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.