ನಗೋಯಾ, ಅ.20 (DaijiworldNews/AA): 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತದ ದೀಪ್ತಿ ಜೀವಂಜಿ ಅವರು ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಐಚಿ-ನಗೋಯಾದಲ್ಲಿ ನಡೆಯುತ್ತಿರುವ 5ನೇ ಏಷ್ಯನ್ ಪ್ಯಾರಾ ಗೇಮ್ಸ್ನ ಎರಡನೇ ದಿನದಂದು ದೀಪ್ತಿ ಜೀವಂಜಿ ಅವರು ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ 56.36 ಸೆಕೆಂಡುಗಳ ಸಮಯದೊಂದಿಗೆ ಹೊಸ ಗೇಮ್ಸ್ ದಾಖಲೆಯನ್ನು ನಿರ್ಮಿಸಿ, ಚಿನ್ನದ ಪದಕ ಗೆದ್ದಿದ್ದಾರೆ.
ಪುರುಷರ ಜಾವೆಲಿನ್ ಎಸೆತದ ಫೈನಲ್ನಲ್ಲಿ ಪ್ರದೀಪ್ ಕುಮಾರ್ ಬೆಳ್ಳಿ ಪದಕ, ಆಯುಷ್ ವರ್ಮಾ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಶೂಟಿಂಗ್ ವಿಭಾಗದಲ್ಲಿ ಮನೀಶ್ ನರ್ವಾಲ್, ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ಬೆಳ್ಳಿ ಪದಕ ಗೆದ್ದರು. ಇನ್ನು ಅಶೋಕ್ 192 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕವನ್ನು ಗೆದ್ದರು. ಭಾವಿನಾ ಪಟೇಲ್, ಮಹಿಳೆಯರ ಟೇಬಲ್ ಟೆನ್ನಿಸ್ ನಲ್ಲಿ ಕಂಚಿನ ಪದಕ ಗಳಿಸಿದರು.
ಮೊದಲ ದಿನವೇ ಭಾರತಕ್ಕೆ 11 ಪದಕಗಳು ಲಭಿಸಿವೆ. ಈ ಮೂಲಕ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಭಾರತ, ತನ್ನ ಪದಕಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.