ಮೆಲ್ಬೋರ್ನ್, ನ.03 (DaijiworldNews/AK):ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ಬಿಡುಗಡೆಯಾದ ‘ದಿ ಫೈನಲ್ ವರ್ಡ್’ ಪಾಡ್ಕ್ಯಾಸ್ಟ್ನ ಸಂಚಿಕೆಯಲ್ಲಿ ಮಾತನಾಡಿದ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ವಿಕ್ಟೋರಿಯಾ ಪರ ದೇಶೀಯ 50 ಓವರ್ ಹಾಗೂ ಪ್ರಥಮ ದರ್ಜೆ (ನಾಲ್ಕು ದಿನಗಳ ರೆಡ್ ಬಾಲ್) ಕ್ರಿಕೆಟ್ಗೂ ವಿದಾಯ ಹೇಳಿದ್ದಾರೆ.

ಕ್ರಿಕೆಟ್ ಜಗತ್ತಿನಲ್ಲಿ ‘ದಿ ಬಿಗ್ ಶೋ’ ಎಂದೇ ಜನಪ್ರಿಯರಾಗಿದ್ದ 38 ವರ್ಷದ ಮ್ಯಾಕ್ಸ್ವೆಲ್, ಆಸ್ಟ್ರೇಲಿಯಾ ಪರ 149 ಏಕದಿನ, 130 ಟಿ20 ಹಾಗೂ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 2015 ಮತ್ತು 2023ರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದ ಅವರು, 2021ರ ಟಿ20 ವಿಶ್ವಕಪ್ ವಿಜಯದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ನಾನು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮತ್ತು ವಿಕ್ಟೋರಿಯಾ ತಂಡದ ಪರ 50 ಓವರ್ ಹಾಗೂ ನಾಲ್ಕು ದಿನಗಳ ಕೆಂಪು ಚೆಂಡಿನ ಕ್ರಿಕೆಟ್ಗೆ ಸಂಪೂರ್ಣವಾಗಿ ವಿದಾಯ ಹೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ತಮ್ಮ ವೃತ್ತಿಜೀವನದ ಮುಂದಿನ ಕೆಲವು ಟೂರ್ನಿಗಳಿಗಾಗಿ ದೇಹವನ್ನು ಸಜ್ಜುಗೊಳಿಸಲು ಮತ್ತು ಫಿಟ್ನೆಸ್ ಕಾಪಾಡಿಕೊಳ್ಳಲು ಹೆಚ್ಚಿನ ಸಮಯ ನೀಡುವ ಅಗತ್ಯವಿದೆ ಎಂದು ಮ್ಯಾಕ್ಸ್ವೆಲ್ ಹೇಳಿದ್ದಾರೆ. ವೃತ್ತಿಜೀವನದಲ್ಲಿ ಉಳಿದಿರುವ ಬೆರಳೆಣಿಕೆಯ ಟೂರ್ನಿಗಳನ್ನು ಯಶಸ್ವಿಯಾಗಿ ಮುಗಿಸಲು ನನ್ನ ಫಿಟ್ನೆಸ್ಗೆ ಹೆಚ್ಚು ಸಮಯ ಮೀಸಲಿಡುವ ಕಾಲ ಬಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.