ಆಕ್ಲೆಂಡ್, ನ.04 (DaijiworldNews/AA): ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ಗಳ ಗೆಲುವು ಸಾಧಿಸಿದೆ.

ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೀವಿಸ್ 40.2 ಓವರ್ಗಳಲ್ಲಿ 185 ರನ್ಗಳಿಗೆ ಆಲೌಟ್ ಆಗಿತ್ತು.
ಬಳಿಕ ಮಳೆ ಅಡ್ಡಿಯಾದ ಹಿನ್ನೆಲೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಾಕಾರ ಭಾರತಕ್ಕೆ 32 ಓವರ್ಗಳಲ್ಲಿ 143 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಭಾರತ 22.4 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 51 ಎಸೆತಗಳಲ್ಲಿ 74 ರನ್, ಶುಭಮನ್ ಗಿಲ್ 56 ಎಸೆತಗಳಲ್ಲಿ 37 ರನ್ ಗಳಿಸಿದರು. ವಿರಾಟ್ ಕೊಹ್ಲಿ ಹಾಗೂ ನಾಯಕ ಶುಭಮನ್ ಗಿಲ್ ಜೋಡಿ 104 ಎಸೆತಗಳಲ್ಲಿ 113 ರನ್ಗಳ ಜೊತೆಯಾಟ ನೀಡುವ ಮೂಲಕ ಉತ್ತಮ ಪ್ರದರ್ಶನ ನೀಡಿದರು.
ಇನ್ನು ಟೀಂ ಇಂಡಿಯಾ ಪರ ಅರ್ಷ್ದೀಪ್ ಸಿಂಗ್ 4 ವಿಕೆಟ್, ಅನ್ಶುಲ್ ಕಾಂಬೋಜ್ 2 ವಿಕೆಟ್, ಗುರ್ನೂರ್ ಬ್ರಾರ್ 3 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಭಾರತ ತಂಡವು ಈ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.