ದೆಹಲಿ, ನ.08 (DaijiworldNews/AA): ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೆರಡು ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುವ ಹಂತದಲ್ಲಿದ್ದಾರೆ. ಈ ಸಾಧನೆ ಮಾಡಿದರೆ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆಯನ್ನು ರೋಹಿತ್ ನಿರ್ಮಿಸಲಿದ್ದಾರೆ.

ಏಕದಿನ ಕ್ರಿಕೆಟ್ನಲ್ಲಿ 400 ಸಿಕ್ಸರ್ಗಳ ಗಡಿ ತಲುಪಲು ರೋಹಿತ್ ಶರ್ಮಾ ಅವರಿಗೆ ಇನ್ನು ಕೇವಲ 17 ಸಿಕ್ಸರ್ಗಳ ಅಗತ್ಯವಿದೆ. ಸದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದ ಪಂದ್ಯಗಳಲ್ಲಿ ಅಥವಾ ನಂತರ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಯಲ್ಲಿ ರೋಹಿತ್ 17 ಸಿಕ್ಸರ್ ಗಳಿಸಿದಲ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 400 ಸಿಕ್ಸರ್ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂದೆನಿಸಿಕೊಳ್ಳಲಿದ್ದಾರೆ.
ಇದರೊಂದಿಗೆ ರೋಹಿತ್ ಶರ್ಮಾ ಟೆಸ್ಟ್, ಏಕದಿನ ಹಾಗೂ ಟಿ20 ಸೇರಿದಂತೆ ಮೂರು ಮಾದರಿಗಳಲ್ಲಿ ಒಟ್ಟಾರೆ 700 ಸಿಕ್ಸರ್ಗಳನ್ನು ಪೂರೈಸುವ ಅವಕಾಶವಿದೆ. ಒಂದು ವೇಳೆ 700 ಸಿಕ್ಸರ್ ಪೂರೈಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಗೆ ಪಾತ್ರರಾಗಲಿದ್ದಾರೆ. ಇನ್ನು ಈ ಸಾಧನೆ ಮಾಡಲು ಅವರಿಗೆ ಕೇವಲ 24 ಸಿಕ್ಸರ್ಗಳ ಅಗತ್ಯವಿದೆ.