ಟೋಕಿಯೊ,ಆ.03 (DaijiworldNews/HR): ಟೋಕಿಯೊ ಒಲಿಂಪಿಕ್ಸ್ನ ಪುರುಷರ ಹಾಕಿ ಸೆಮಿಫೈನಲ್ನಲ್ಲಿ ಭಾರತ ತಂಡವು ಬೆಲ್ಜಿಯಂ ವಿರುದ್ಧ 2-5 ಅಂತರದಲ್ಲಿ ಸೋಲು ಕಂಡಿದೆ.
ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡ ಪಂದ್ಯದಲ್ಲಿ 2-5 ಅಂತರದಲ್ಲಿ ಸೋಲು ಕಂಡಿದ್ದು, ಫೈನಲ್ ಪ್ರವೇಶಿಸುವ ಭಾರತದ ಕನಸು ಭಗ್ನಗೊಂಡಿದೆ.
ಇನ್ನು ಬೆಲ್ಜಿಯಂ ತಂಡದ ವಿರುದ್ಧ 5-2 ಗೋಲುಗಳ ಅಂತರದಿಂದ ಭಾರತ ತಂಡ ಸೋಲು ಕಂಡಿದ್ದರೂ ಕೂಡ ಭಾರತವು ಕಂಚಿನ ಪದಕಕ್ಕೆ ಸೆಣಸಾಡಲಿದೆ.
ಪಂದ್ಯ ಮುಕ್ತಾಯವಾದ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಸೋಲು-ಗೆಲುವು ಜೀವನದ ಭಾಗ. ನಮ್ಮ ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಮುಂದಿನ ಪಂದ್ಯಕ್ಕೆ ಮತ್ತು ಭವಿಷ್ಯದ ಅಭಿಯಾನಕ್ಕೆ ತಂಡಕ್ಕೆ ಶುಭಾಶಯಗಳು, ನಮ್ಮ ಆಟಗಾರರ ಬಗ್ಗೆ ಹೆಮ್ಮೆಯಿದೆ" ಎಂದು ಹೇಳಿದ್ದಾರೆ.