ಟೋಕಿಯೋ, ಆ 06 (DaijiworldNews/MS): ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 65 ಕೆಜಿ ತೂಕ ವಿಭಾಗದಲ್ಲಿ ಸೆಮಿ ಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಪಂದ್ಯದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಕಿರ್ಗಿಸ್ತಾನದ ಎರ್ನಾಜರ್ ಅಕ್ಮತಲೀವ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.
ಬಜರಂಗ್ ಅವರು ಶುಕ್ರವಾರ ಮಧ್ಯಾಹ್ನ 2:55ಕ್ಕೆ ನಡೆಯಲಿರುವ ಸೆಮಿ ಫೈನಲ್ ನಲ್ಲಿ ಅಝರ್ ಬೈಜಾನ್ ನ ಹಾಜಿ ಅಲಿಯೇವ್ ಅವರನ್ನು ಎದುರಿಸಲಿದ್ದಾರೆ.