ಟೋಕಿಯೋ, ಆ 30 (DaijiworldNews/MS): ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆರಡು ಪದಕ ಲಭಿಸಿದೆ. ಇಂದು ಬೆಳಗ್ಗೆ ಮುಗಿದ ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಪಂದ್ಯದಲ್ಲಿ 19 ವರ್ಷದ ಅವನಿ ಲೆಖರ ಚಿನ್ನದ ಪದಕ ಹಾಗೂ ಪುರುಷರ ಎಫ್ 56 ಡಿಸ್ಕಸ್ ಥ್ರೋ ವಿಭಾಗದಲ್ಲಿ ಭಾರತೀಯ ಡಿಸ್ಕಸ್ ಎಸೆತಗಾರ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಪ್ಯಾರಲಿಂಪಿಕ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿರುವ ಅವನಿ ಇದುವರೆಗೆ ಚಿನ್ನ ಗೆದ್ದ ಭಾರತೀಯ ಆಟಗಾರರಲ್ಲಿ ನಾಲ್ಕನೆಯವರಾಗಿದ್ದಾರೆ.
ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದುಬೀಗಿದ್ದು ಎಂಟು ಸ್ಪರ್ಧಿಗಳ ನಡುವೆ ನಡೆದ ಸ್ಪರ್ಧೆಯಲ್ಲಿ ಕಥುನಿಯಾ ತನ್ನ ಆರನೇ ಪ್ರಯತ್ನದಲ್ಲಿ ತನ್ನ ಸೀಸನ್ ನ ಅತ್ಯುತ್ತಮವಾದ 44.38 ಮೀ. ಎಸೆತವನ್ನು ಎಸೆದ್ದಾರೆ.