ಟೋಕಿಯೋ, ಸೆ. 04 (DaijiworldNews/PY): ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್ನಲ್ಲಿ ಮನೀಶ್ ನರ್ವಾಲ್ ಚಿನ್ನ ಹಾಗೂ ಸಿಂಗರಾಜ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಶನಿವಾರ ನಡೆದ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ಹೆಚ್1 ವಿಭಾಗದಲ್ಲಿ ಭಾರತದ ಮನೀಶ್ ನರ್ವಾಲ್ ಚಿನ್ನ ಹಾಗೂ ಸಿಂಗರಾಜ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಮನೀಶ್ ನರ್ವಾಲ್ ಅವರು 218.2 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದು, ಸಿಂಗರಾಜ್ ಅವರು 216.7 ಅಂಕ ಪಡೆದು 2ನೇ ಸ್ಥಾನಕ್ಕೇರಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಒಂದೇ ಫೈನಲ್ ಪಂದ್ಯದಲ್ಲಿ ಉಭಯ ಆಟಗಾರರು ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದಿದ್ದಾರೆ.
ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೇ ಏರಿಕೆಯಾಗಿದ್ದು, ಈ ಪೈಕಿ 3 ಚಿನ್ನ, 7 ಬೆಳ್ಳಿ ಹಾಗೂ 5 ಕಂಚಿನ ಪದಕ ಸೇರಿವೆ.