ಬೆಂಗಳೂರು, ಮೇ 06 (Daijiworld News/MB) : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರುವ ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಈ ಮೊದಲು ಕೋವಿಡ್ ವಿರುದ್ಧ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಮಾಧ್ಯಮದವರನ್ನು ಕೂಡ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಅವರನ್ನೂ ಆರೋಗ್ಯ ವಿಮೆ ಸೌಲಭ್ಯ ವ್ಯಾಪ್ತಿಗೆ ತರಬೇಕು ಎಂದು ಇತ್ತೀಚೆಗೆ ಪತ್ರಕರ್ತರ ಸಂಘ ಮುಖ್ಯಮಂತ್ರಿಯವರಿಗೆ ಮನವಿ ಮಾಡಿತ್ತು.