ಬೆಂಗಳೂರು, ಮಾ. 23 (DaijiworldNews/HR): ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಹಾಸ್ಯನಟಿ ಶ್ರದ್ಧಾ ಅವರನ್ನು ಭೇಟಿಯಾಗಿದ್ದು, ಇದೀಗ ಇವರಿಬ್ಬರ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
![](https://daijiworld.ap-south-1.linodeobjects.com/Linode/img_tv247/hr-230323-film.jpg)
ಇನ್ಸ್ಟಾಗ್ರಾಮ್ನಲ್ಲಿ ಸ್ಮೃತಿ ಇರಾನಿ ಅವರು ಸೆಲ್ಫಿಗಳ ಪೋಟೊಗಳನ್ನು ಹಂಚಿಕೊಂಡಿದ್ದು, ಇಬ್ಬರೂ ಒಂದೇ ರೀತಿಯಲ್ಲಿ ವಿಧ ವಿಧ ಮುಖ ಚಹರೆ ಮಾಡಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.
ಇನ್ನು ಈ ಪೋಸ್ಟ್ ಸಖತ್ ವೈರಲ್ ಆಗಿದ್ದು, ಇನ್ಸ್ಟಾಗ್ರಾಮ್ ಬಳಕೆದಾರರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.