ಮುಂಬೈ, ಏ.28 (DaijiworldNews/AA): ನಟಿ ಶ್ರೀಲೀಲಾ ಅವರು ನಟನೆಯ ಮೂಲಕ ಅಷ್ಟೇ ಅಲ್ಲದೇ ಸಾಮಾಜಿಕ ಕೆಲಸಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಇದೀಗ ಶ್ರೀಲೀಲಾ ಮತ್ತೊಂದು ಪುಟ್ಟ ಕಂದಮ್ಮನನ್ನು ದತ್ತು ಪಡೆದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಮನೆಗೆ ಮತ್ತೊಂದು ಸದಸ್ಯೆಯ ಆಗಮನ' ಎಂದು ಬರೆದುಕೊಂಡಿದ್ದಾರೆ. ಶ್ರೀಲೀಲಾ ಹಂಚಿಕೊಂಡಿರುವ ಈ ಫೋಟೋಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇಷ್ಟು ಸಣ್ಣ ವಯಸ್ಸಿನಲ್ಲಿ ಅವರು ಸಾಮಾಜಿಕ ಕೆಲಸದ ಬಗ್ಗೆ ಇಷ್ಟೊಂದು ಗಮನ ಹರಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ಅಭಿಮಾನಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಶ್ರೀಲೀಲಾ ಅವರು 21ನೇ ವಯಸ್ಸಿಗೆ ಎರಡು ಮಕ್ಕಳ ದತ್ತು ಪಡೆದಿದ್ದರು. ಇದೀಗ 23 ವಯಸ್ಸಿಗೆ ಮತ್ತೊಂದು ಮಗುವನ್ನು ದತ್ತು ಪಡೆದಿದ್ದಾರೆ. ಈ ಮೂಲಕ ಅವರು ಮೂರು ಮಕ್ಕಳಿಗೆ ತಾಯಿಯ ಸ್ಥಾನವನ್ನು ತುಂಬಿದ್ದಾರೆ.