ಬೆಂಗಳೂರು, ಜು. 17(DaijiworldNews/TA): ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದವರು. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ ಅನುಶ್ರೀ ಅವರ ವಿವಾಹ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಹೇಳಲಾಗಿದೆ.

ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡವರು ಅನುಶ್ರೀ. ವೇದಿಕೆ ಯಾವುದೇ ಇದ್ದರೂ ಅಂಜದೆ, ಅಳುಕದೆ ನಿರೂಪಣೆ ಮಾಡುವ ಸಾಮರ್ಥ್ಯ ಅವರಿಗೆ ಇದೆ. ಸುಂದರವಾಗಿ, ಮನರಂಜಾತ್ಮಕವಾಗಿ ಅವರು ಆ್ಯಂಕರಿಂಗ್ ಮಾಡ ಬಲ್ಲರು. ಈ ಕಾರಣದಿಂದಲೇ ಆ್ಯಂಕರಿಂಗ್ ಲೋಕದಲ್ಲಿ ಅವರು ಸಾಕಷ್ಟು ಬೇಡಿಕೆಯ ನಿರೂಪಕರಾಗಿದ್ದಾರೆ.
ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಕೂರ್ಗ್ ಮೂಲದ ಬೆಂಗಳೂರಿನ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ ಎನ್ನಲಾಗಿದೆ. ಇನ್ನು ಇದು ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಇನ್ನು ಈ ಬಗ್ಗೆ ಅನುಶ್ರೀ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.