ಬೆಂಗಳೂರು, ಆ. 21 (DaijiworldNews/AK): ಕನ್ನಡದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ನಟ ಡಾಲಿ ಧನಂಜಯ್ಗೆ ಇದೆ. ಅವರು ‘ಟಗರು’ ಸಿನಿಮಾದಲ್ಲಿ ‘ಡಾಲಿ’ ಪಾತ್ರ ಮಾಡಿ ಅದೇ ಹೆಸರಲ್ಲಿ ಫೇಮಸ್ ಆದರು. ಆಗಸ್ಟ್ 23ರಂದು ಅವರು 39ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಆದರೆ, ಈ ಬಾರಿ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ. ಈ ವಿಚಾರದ ಬಗ್ಗೆ ಅವರು ಕೆಲವೇ ದಿನ ಮೊದಲ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ನನ್ನ ಪ್ರೀತಿಯ ಅಭಿಮಾನಿಗಳೇ, ಆಗಸ್ಟ್ 23ರಂದು ನನ್ನ ಬರ್ತ್ಡೇ. ಪ್ರತಿ ವರ್ಷ ನನ್ನ ಜನ್ಮದಿನ ಅಂದರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ ಈ ಬಾರಿ ನಾನು ಕೆಲಸದ ನಿಮಿತ್ತ ಹೊರಗಡೆ ಹೋಗುತ್ತಿದ್ದೇನೆ. ಈ ಸಂಭ್ರಮಾಚರಣೆಗೆ ನಿಮ್ಮ ಜೊತೆ ಇರಲಾಗದಿದ್ದರೂ, ನಿಮ್ಮ ಪ್ರೀತಿ, ಹಾರೈಕೆ, ಆಶೀರ್ವಾದ ನನ್ನೊಡನೆ ಇರುತ್ತದೆ ಎನ್ನುವ ದೃಢ ನಂಬಿಕೆಯಿದೆ. ಮುಂದಿನ ಸಲ ಇನ್ನೂ ಡಬ್ಬಲ್ ಎನರ್ಜಿ, ಡಬ್ಬಲ್ ಸಂಭ್ರಮ, ಜೊತೆಗೆ ಆಚರಿಸೋಣ. ಲವ್ ಯೂ ಆಲ್, ಡಾಲಿ’ ಎಂದು ಬರೆದುಕೊಂಡಿದ್ದಾರೆ.
ಡಾಲಿ ಧನಂಜಯ್ಗೆ ವಿವಾಹ ಆದ ಬಳಿಕ ಇದು ಮೊದಲ ಜನ್ಮದಿನ. ಹೀಗಾಗಿ, ಪತ್ನಿ ಧನ್ಯಾತ ಜೊತೆ ಅವರು ಎಲ್ಲಾದರೂ ಸುತ್ತಾಡಲು ಹೋಗಬಹದು ಎಂದು ಹೇಳಲಾಗುತ್ತಿದೆ