ಚೆನ್ನೈ, ಆ. 29 (DaijiworldNews/AA): ತಮಿಳು ನಟ ವಿಶಾಲ್ ಅವರು ತಮ್ಮ ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ಸಿಹಿ ನುದ್ದಿ ನೀರಿದ್ದಾರೆ. ನಟಿ ಸಾಯಿ ಧನ್ಸಿಕಾ ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಫೋಟೋಸ್ಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ವಿಶಾಲ್ ಅವರು ತಮ್ಮ 48ನೇ ವಯಸ್ಸಿನಲ್ಲಿ ಧನ್ಸಿಕಾ ಜೊತೆ ವಿವಾಹಕ್ಕೆ ಸಜ್ಜಾಗಿದ್ದಾರೆ. ನಟ ವಿಶಾಲ ಹಾಗೂ ನಟಿ ಧನ್ಸಿಕಾ ಅವರು ಸರಳವಾಗಿ ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ನಟ ವಿಶಾಲ್ ಧನ್ಸಿಕಾ ಜೊತೆ ಆಗಸ್ಟ್ 29ಕ್ಕೆ ವಿವಾಹವಾಹುತ್ತಿರುವುದಾಗಿ ಘೋಷಿಸಿದ್ದರು. ಆದರೆ ಇದೀಗ ಇಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಜೋಡಿ ಮದುವೆ ದಿನಾಂಕವನ್ನು ಪ್ರಕಟಿಸಿಲ್ಲ.