ಬೆಂಗಳೂರು, ಸೆ. 06 (DaijiworldNews/AK): ದುಬೈನಲ್ಲಿ ಅದ್ದೂರಿಯಾಗಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಪ್ರಧಾನ ಸಮಾರಂಭ ನಡದಿದೆ. ಸಮಾರಂಭದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ. ಪ್ರಶಸ್ತಿ ಹಿಡಿದು ಅವರು ಖುಷಿಯಿಂದ ಪೋಸ್ ನೀಡಿದ್ದಾರೆ.
ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರು ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಅವರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.