ಕೆನಡಾ, ಅ. 17 (DaijiworldNews/AA): ಪಂಜಾಬಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೆನಡಾನಲ್ಲಿ ಕಪಿಲ್ ಶರ್ಮಾ ಅವರು ರೆಸ್ಟೊರೆಂಟ್ ತೆರೆದಿದ್ದರು. ಇದೀಗ ಗುರುವಾರ ರಾತ್ರಿ ರೆಸ್ಟೊರೆಂಟ್ ಮೇಲೆ ಇತ್ತೀಚೆಗೆ ಭೂಗತ ಪಾತಕಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಭೂಗತ ಪಾತಕಿಗಳು ರೆಸ್ಟೊರೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಬರೋಬ್ಬರಿ ಮೂರನೇ ಬಾರಿಗೆ ಕೆನಡಾದ ಸರ್ರೆಯ ನ್ಯೂ ಟೌನ್ ಏರಿಯಾನಲ್ಲಿ ರೆಸ್ಟೊರೆಂಟ್ ಗುಂಡಿನ ದಾಳಿ ಮಾಡಿದ್ದಾರೆ. ಅಲ್ಲಿನ ಕಾಲಮಾನ 3:45ರ ಸುಮಾರಿಗೆ ಕೆಲ ಅಗಂತುಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಯಾರಿಗೂ ಹಾನಿ ಆಗಿಲ್ಲ ಆದರೆ ರೆಸ್ಟೊರೆಂಟ್ನ ಗಾಜಿಗೆ ಹಾನಿಯುಂಟಾಗಿದೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ಗೆ ಸೇರಿದ ಕುಲ್ವೀರ್ ಸಿಧು ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ.
ಗುಂಡಿನ ದಾಳಿ ಮಾಡಿದ ವ್ಯಕ್ತಿ ಅದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಸಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಸಹ ಹಂಚಿಕೊಂಡಿದ್ದಾನೆ. ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಕಾರಿನ ಕಿಟಕಿಯಿಂದ ಕೈ ಹೊರಗೆ ಚಾಚಿ ಹಲವಾರು ಬಾರಿ ರೆಸ್ಟೊರಂಟ್ನತ್ತ ಗುಂಡು ಹಾರಿಸುವ ದೃಶ್ಯ ವಿಡಿಯೋನಲ್ಲಿ ಸೆರೆಯಾಗಿದೆ. ವ್ಯಕ್ತಿ ಗುಂಡು ಹಾರಿಸುತ್ತಿದ್ದಂತೆ ರೆಸ್ಟೊರೆಂಟ್ನ ಕಿಟಕಿ, ಬಾಗಿಲಿನ ಗಾಜುಗಳೆಲ್ಲ ಪುಡಿಯಾಗಿ ಕೆಳಗೆ ಉರುಳಿವೆ. ಈ ಘಟನೆ ನಡೆದ ಸಂದರ್ಭದಲ್ಲಿ ರೆಸ್ಟೊರೆಂಟ್ನ ಸಿಬ್ಬಂದಿ ಒಳಗೆ ಇದ್ದರು ಆದರೆ ಯಾರಿಗೂ ಸಹ ಯಾವುದೇ ರೀತಿಯ ಹಾನಿ ಆಗಿಲ್ಲ ಎನ್ನಲಾಗುತ್ತಿದೆ.
ಘಟನೆ ಕುರಿತಾಗಿ ಕಪಿಲ್ ಶರ್ಮಾ ಈ ವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಸ್ಥಳೀಯ ಪೊಲೀಸರು ಘಟನೆ ಕುರಿತಾಗಿ ದೂರು ದಾಖಲಿಸಿಕೊಂಡಿದ್ದಾರೆ. ಮೊದಲಿಗೆ ಇದೇ ವರ್ಷ ಜುಲೈ 9 ರಂದು ದಾಳಿ ಮಾಡಲಾಗಿತ್ತು. ಅದಾದ ಬಳಿಕ ಆಗಸ್ಟ್ 7 ರಂದು ದಾಳಿ ಮಾಡಲಾಯ್ತು. ಈಗ ಅಕ್ಟೋಬರ್ 16 ರಂದು ದಾಳಿ ಮಾಡಲಾಗಿದೆ.