ಮುಂಬೈ, ಏ. 19 (DaijiworldNews/AA): ಬಾಲಿವುಡ್ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ದಂಪತಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ನೀಡಿದ್ದಾರೆ.

ದೀಪಿಕಾ-ರಣವೀರ್ ದಂಪತಿ ತಮ್ಮ ಮಗಳು ದುವಾ, ಪ್ರೆಗ್ನೆನ್ಸಿ ಟೆಸ್ಟ್ ಕಿಟ್ ಹಿಡಿದಿರುವ ಫೋಟೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ತಾವು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದೇವೆಂದು ಘೋಷಿಸಿಕೊಂಡಿದ್ದಾರೆ. ಇನ್ನು ಈ ದಂಪತಿಗೆ ಅಭಿಮಾನಿಗಳು ಮತ್ತು ಹಿತೈಷಿಗಳು ವಿಶ್ ಮಾಡುತ್ತಿದ್ದಾರೆ.
2018 ರಲ್ಲಿ ದೀಪಿಕಾ ಮತ್ತು ರಣವೀರ್ ಇಟಲಿಯಲ್ಲಿ ಮದುವೆಯಾಗಿದ್ದರು. 2024ರ ಸೆಪ್ಟೆಂಬರ್ 8 ರಂದು ದೀಪಿಕಾ ಮತ್ತು ರಣವೀರ್ ಗೆ ಮೊದಲ ಹೆಣ್ಣು ಜನಿಸಿದ್ದು, ಈ ದಂಪತಿ ತಮ್ಮ ಮಗಳಿಗೆ ದುವಾ ಎಂದು ಹೆಸರಿಟ್ಟಿದ್ದಾರೆ.