ಅಮರಾವತಿ, ಮೇ. 04 (DaijiworldNews/AA): ಇಂದು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರ ಜನ್ಮದಿನ. ಈ ಹಿನ್ನೆಲೆ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು 43ನೇ ವಸಂತಕ್ಕೆ ಕಾಲಿಟ್ಟಿರುವ ತ್ರಿಷಾ, ತಮ್ಮ ಜನ್ಮದಿನದ ಅಂಗವಾಗಿ ಇಂದು ಮುಂಜಾನೆಯೇ ತಿರುಪತಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮುನ್ನವೇ ತ್ರಿಷಾ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿರುವುದು ದಳಪತಿ ವಿಜಯ್ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ.
ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ನಟಿ ತ್ರಿಷಾ ಆಪ್ತ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿದೆ.