ಚೆನ್ನೈ, ಮೇ. 09 (DaijiworldNews/AK):ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆ ನಟಿ ರಾಖಿ ಸಾವಂತ್ ಅವರಿಬ್ಬರು ಮದುವೆಯಾಗಬೇಕು ಎಂದು ಹೇಳುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್, ಇದೀಗ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ಸಮಯದಿಂದ ನಟಿ ತ್ರಿಷಾ ಮತ್ತು ವಿಜಯ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಬೆನ್ನಲ್ಲೇ ಬಾಲಿವುಡ್ನ ವಿವಾದಾತ್ಮಕ ನಟಿ ರಾಖಿ ಸಾವಂತ್ ನೀಡಿರುವ ಹೇಳಿಕೆ ಈಗ ಹೊಸ ಸಂಚಲನ ಸೃಷ್ಟಿಸಿದೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ರಾಖಿ ಸಾವಂತ್, ವಿಜಯ್ ಮತ್ತು ತ್ರಿಷಾ ಜೋಡಿ ಅದ್ಭುತವಾಗಿದೆ. ಅವರಿಬ್ಬರೂ ಈಗಲೇ ಮದುವೆಯಾಗಬೇಕು. ಅವರ ಮೆಹಂದಿ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೋಗೋಣ ಎಂದು ಹೇಳಿದ್ದಾರೆ.
ತ್ರಿಷಾ ಜೊತೆಗಿನ ಅವರ ಸ್ನೇಹದ ಬಗ್ಗೆ ಮಾತನಾಡಿದ ಅವರು, ನಾನು ಮತ್ತು ತ್ರಿಷಾ ಚಿತ್ರರಂಗದಲ್ಲಿ ಒಟ್ಟಿಗೆ ವೃತ್ತಿಜೀವನ ಆರಂಭಿಸಿದವರು, ಹಾಗಾಗಿ ಅವರು ನನಗೆ ಚೆನ್ನಾಗಿ ಗೊತ್ತು ಎಂದು ನಟಿ ಹೇಳಿಕೊಂಡಿದ್ದಾರೆ.