ಬೆಂಗಳೂರು, ಮೇ. 14 (DaijiworldNews/AA): ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರನ್ನ ನೆನೆದು ಅವರ ಪತ್ನಿ ಶ್ರೀವಿದ್ಯಾ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

'ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ. ದಿಲೀಪ್ ಅವರು ಕಲೆ, ಸಿನಿಮಾ ಮತ್ತು ನಾವು ಇನ್ನು ಮುಂದೆ ಅನುಭವಿಸುವ ಪ್ರತಿಯೊಂದು ದಯೆಯ ರೂಪದಲ್ಲಿ ನಮ್ಮೊಂದಿಗೇ ಇರುತ್ತಾರೆ' ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರಿಗೆ ಹೊಸ ಜೀವನ ಸಿಗಲಿ. ಆದರೆ ಒಂದು ವಿಷಯ ಮಾತ್ರ ಖಚಿತ - ನಾನು ಅವರನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ' ಎಂದು ಭಾವುಕ ಸಾಲುಗಳನ್ನು ಬರೆದಿದ್ದಾರೆ.