ಉಡುಪಿ, ಅ.24 (DaijiworldNews/TA): ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರು ಇಂದು ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.

ನಟಿ ಮಾಲಾಶ್ರೀ ಅವರು ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಮಠಕ್ಕೆ ಆಗಮಿಸಿದರು. ಈ ವೇಳೆ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಮುಖ್ಯಪ್ರಾಣ ದೇವರ ಸನ್ನಿಧಾನಕ್ಕೂ ಭೇಟಿ ನೀಡಿದ ಅವರು, ದೇವರ ಆಶೀರ್ವಾದ ಪಡೆದರು. ನಟಿ ಮಾಲಾಶ್ರೀ ಅವರ ಉಡುಪಿ ಭೇಟಿ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕ್ಷಣಗಳಿಗೆ ಸಾಕ್ಷಿಯಾಯಿತು.