ಮುಂಬೈ, ನ.04 (DaijiworldNews/AA): ಬಾಲಿವುಡ್ ನಟ ಆಯುಷ್ಮಾನ್ ಖುರಾನಾಗೆ ಬಿಷ್ಣೋಯ್ ಗ್ಯಾಂಗ್ ಜೊತೆ ನಂಟಿದೆ ಎನ್ನಲಾದ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಬಂದಿದ್ದು, ಕೋಟ್ಯಂತರ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬಾಲಿವುಡ್ ನಟ ಆಯುಷ್ಮಾನ್ ಖುರಾನಾಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನೊಂದಿಗೆ ನಂಟು ಹೊಂದಿದ್ದಾನೆ ಎನ್ನಲಾದ ವ್ಯಕ್ತಿಯೋರ್ವನಿಂದ ಆಡಿಯೋ ಸಂದೇಶ ಬಂದಿದೆ. ಆ ಆಡಿಯೋದಲ್ಲಿ ಕೋಟ್ಯಂತರ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಆದರೆ ಈವರೆಗೆ ಎಫ್ಐಆರ್ ದಾಖಲಾಗಿಲ್ಲ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆಡಿಯೋ ಕ್ಲಿಪ್ ಬಂದಿರುವುದನ್ನು ಖಚಿತಪಡಿಸಿದ್ದು, ತನಿಖೆ ಮುಂದುವರೆದಿದೆ. ಸದ್ಯ ನಟನಿಗೆ ಬಂದಿರುವ ಆಡಿಯೋ ಕ್ಲಿಪ್ನಲ್ಲಿ ಹೇಳಿಕೊಂಡಿರುವ ಆರೋಪಿ ಹೆಸರು ಹಾಗೂ ಪೊಲೀಸರು ತಮ್ಮ ದಾಖಲೆಗಳಲ್ಲಿರುವ ಹೆಸರುಗಳೊಂದಿಗೆ ಹೋಲಿಕೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.