ಬೆಂಗಳೂರು, ,ನ.05 (DaijiworldNews/AK): ’ವಿಶ್ವಾದ್ಯಂತ ಬಹುನಿರೀಕ್ಷೆ ಹುಟ್ಟುಹಾಕಿದ್ದ ಭಾರತೀಯ ಚಿತ್ರರಂಗದ ಮಹೋನ್ನತ ಸಿನಿಮಾ ರಾಮಾಯಣ ಇಂದು ಅದ್ಧೂರಿಯಾಗಿ ತೆರೆಕಂಡಿದೆ.

ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಕಾಂಬಿನೇಷನ್ನ ಈ ಪೌರಾಣಿಕ ಮಹಾಕಾವ್ಯವು ಮೊದಲ ದಿನವೇ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಸೂಚನೆ ನೀಡಿದೆ.
ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಭು ಶ್ರೀರಾಮನ ಪಾತ್ರದಲ್ಲಿ ಕಂಗೊಳಿಸಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಮನಮುಟ್ಟುವಂತೆ ಅಭಿನಯಿಸಿದ್ದಾರೆ. ಇನ್ನು ಲಂಕೇಶ್ವರ ರಾವಣನ ಖಡಕ್ ಅವತಾರದಲ್ಲಿ ಕಾಣಿಸಿಕೊಂಡಿರುವ ನಟ ಯಶ್ ಅವರ ಅಭಿನಯ ಹಾಗೂ ಸ್ಕ್ರೀನ್ ಪ್ರೆಸೆನ್ಸ್ಗೆ ಪ್ರೇಕ್ಷಕರು ಜೈಕಾರ ಹಾಕಿದ್ದಾರೆ.
ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್ನಲ್ಲಿ ನಿರ್ಮಾಣವಾಗಿರುವ ‘ರಾಮಾಯಣ’ ವಿಶ್ವದಾದ್ಯಂತ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಿದೆ. ಭಾರತವೊಂದರಲ್ಲೇ 9 ಸಾವಿರ ಸ್ಕ್ರೀನ್ಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದ್ದು, ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಾಮಾಯಣ ಚಿತ್ರ ಬಿಡುಗಡೆಯಾಗಿದೆ. ವಿಶೇಷವೆಂದರೆ, ಸಿನಿಮಾ ರಿಲೀಸ್ ಆಗುವ ಮುನ್ನವೇ ಮುಂಗಡ ಬುಕಿಂಗ್ ಮೂಲಕವೇ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ.