ಬಂದರ್ ಅಬ್ಬಾಸ್, ಏ.26 (DaijiworldNews/AA): ಇರಾನ್ನ ಬಂದರ್ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಅಗ್ನಿಶಾಮಕ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಬಂದರು ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಾಹಿದ್ ರಾಜೀ ಬಂದರು ವಾರ್ಫ್ ಪ್ರದೇಶದಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ಕಂಟೇನರ್ಗಳು ಸ್ಫೋಟಗೊಂಡಿದ್ದು ಈ ಘಟನೆಗೆ ಕಾರಣ. ನಾವು ಗಾಯಾಳುಗಳನ್ನು ಸ್ಥಳಾಂತರಿಸುತ್ತಿದ್ದೇವೆ ಮತ್ತು ಆಸ್ಪತ್ರೆಗಳಿಗೆ ವರ್ಗಾಯಿಸುತ್ತಿದ್ದೇವೆ ಎಂದು ಸ್ಥಳೀಯ ಬಿಕ್ಕಟ್ಟು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದ ಸ್ಥಳದಿಂದ ದೊಡ್ಡ ಪ್ರಮಾಣದಲ್ಲಿ ಹೊಗೆ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಸ್ಫೋಟದ ಕಾರಣವನ್ನು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.