ಇಸ್ಲಾಮಾಬಾದ್, ಏ.28 (DaijiworldNews/AK): ಭಾರತದ ಮೇಲೆ ಯುದ್ಧಕ್ಕೆ ರೆಡಿಯಾದ ಪಾಕಿಸ್ತಾನಕ್ಕೆ ತನ್ನ ದೇಶದಲ್ಲೇ ಸುರಕ್ಷತೆ ಇಲ್ಲದಂತಾಗಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಶಾಂತಿ ಸಮಿತಿಯ ಕಚೇರಿಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿಯ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಚೇರಿಯೇ ಧ್ವಂಸವಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ಪಡೆದ ಬಳಿಕ ಸ್ಥಳೀಯ ರಕ್ಷಣಾ ಪಡೆಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೂ ಅವಶೇಷಗಳ ಅಡಿ ಜನ ಸಿಲುಕಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.