ಬೀಜಿಂಗ್, ಏ.29 (DaijiworldNews/AA): ಚೀನಾದ ರೆಸ್ಟೋರೆಂಟ್ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 22 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಲಿಯಾನಿಂಗ್ ಪ್ರಾಂತ್ಯದ ಲಿಯಾಯಾಂಗ್ನ ಬೈಟಾ ಜಿಲ್ಲೆಯ ಚುನಿಯಾಂಗ್ ರೆಸ್ಟೋರೆಂಟ್ನಲ್ಲಿ ಈ ಅಗ್ನಿ ಅವಘಡ ನಡೆದಿದೆ. ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆದ ಈ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದುದಾಗಿದೆ. ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಸ್ಥಳದಿಂದ ಓಡಿಹೋಗಿದ್ದಾರೆ.
ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.