ವಾಷಿಂಗ್ಟನ್, ಆ. 22 (DaijiworldNews/AA): ಅಮೆರಿಕದ ಡ್ರೇಕ್ ಪ್ಯಾಸೇಜ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಈ ಭೂಕಂಪವು ಭಾರತೀಯ ಸಮಯ 7.46 ಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದು ಡ್ರೇಕ್ ಪ್ಯಾಸೇಜ್ನಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಡ್ರೇಕ್ ಪ್ಯಾಸೇಜ್ ದಕ್ಷಿಣ ಅಮೆರಿಕ ಮತ್ತು ಅಂಟಾರ್ಕ್ಟಿಕಾ ನಡುವೆ ಇದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆಯ ಆರಂಭಿಕ ವರದಿಗಳು ಭೂಕಂಪದ ತೀವ್ರತೆಯನ್ನು 8.0 ಎಂದು ತಿಳಿಸಿದ್ದವು. ದಕ್ಷಿಣ ಅಮೆರಿಕ ಮತ್ತು ಅಂಟಾರ್ಕ್ಟಿಕ್ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ನಲ್ಲಿ ಈ ಪ್ರದೇಶ ಇರುವುದರಿಂದ ಕಂಪನಗಳು ಹೆಚ್ಚಿವೆ.
ಭೂಕಂಪದ ಬೆನ್ನಲ್ಲೇ ಸುನಾಮಿ ಸಂಭವಿಸಬಹುದು ಎಂಬ ಎಚ್ಚರಿಕೆ ನೀಡಲಾಗಿದೆ. ಇದುವರೆಗೆ ಯಾವುದೇ ರೀತಿಯ ಹಾನಿ ಅಥವಾ ಜೀವಹಾನಿಯ ಬಗ್ಗೆ ವರದಿಯಾಗಿಲ್ಲ.
ಇಷ್ಟು ಹೆಚ್ಚಿನ ತೀವ್ರತೆಯ ಭೂಕಂಪವು ಸಾಗರದಲ್ಲಿ ಸುನಾಮಿಯಂತಹ ವಿಪತ್ತುಗಳಿಗೆ ಕಾರಣವಾಗಬಹುದು. ಈ ಭೂಕಂಪದಿಂದಾಗಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲವಾದರೂ, ಡ್ರೇಕ್ ಪ್ಯಾಸೇಜ್ ಪ್ರದೇಶವನ್ನು ಬಹಳ ಸೂಕ್ಷ್ಮವೆಂದು ಪರಿಗಣಿಸಲಾಗಿದೆ. ಇಲ್ಲಿ ಹಠಾತ್ ಕಂಪನಗಳು ಸ್ಥಳೀಯವಾಗಿ ಮಾತ್ರವಲ್ಲದೆ ಜಾಗತಿಕವಾಗಿಯೂ ಕಳವಳವನ್ನು ಉಂಟುಮಾಡಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.