ವಾಷಿಂಗ್ಟನ್, ಸೆ. 12 (DaijiworldNews/AA): ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, "ಶಂಕಿತ ಆರೋಪಿ ಸಿಕ್ಕಿಬಿದ್ದಿದ್ದಾನೆಂದು ನಾನು ಖಚಿತವಾಗಿ ಹೇಳಬಲ್ಲೆ. ಆರೋಪಿಗೆ ಹತ್ತಿರವಿದ್ದವರೇ ಆತನನ್ನು ಹಿಡಿದು ಒಪ್ಪಿಸಿದ್ದಾರೆ" ಎಂದು ಹೇಳಿದ್ದಾರೆ.
ಬುಧವಾರ ಉತಾಹ್ನಲ್ಲಿ ಭಾಷಣ ಮಾಡುತ್ತಿದ್ದಾಗ ಅನಾಮಿಕನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕಿರ್ಕ್ ಮೃತಪಟ್ಟಿದ್ದರು. ಅಲ್ಲಿನ ಗವರ್ನರ್ ಇದನ್ನು ರಾಜಕೀಯ ಪ್ರೇರಿತ ಹತ್ಯೆ ಎಂದು ಕರೆದಿದ್ದರು. ಬುಧವಾರ ಚಾರ್ಲಿ ಕಿರ್ಕ್ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ ಸ್ಥಳದಿಂದ ಪರಾರಿಯಾಗುತ್ತಿರುವ ದೃಶ್ಯಗಳು ಮತ್ತು ಫೋಟೋಗಳ ಸರಣಿಯನ್ನು ಬಿಡುಗಡೆ ಮಾಡಿತ್ತು.
ಕಿರ್ಕ್ ಅವರು ಟ್ರಂಪ್ ಅವರ ಆಪ್ತ ಮತ್ತು ಕಟ್ಟಾ ಬಲಪಂಥೀಯ ಕಾರ್ಯಕರ್ತ. 'ಟರ್ನಿಂಗ್ ಪಾಯಿಂಟ್ ಯುಎಸ್ಎ' ರಾಜಕೀಯ ಸಂಸ್ಥೆಯ ಸಹಸಂಸ್ಥಾಪಕರಾಗಿದ್ದರು.