ಕಠ್ಮಂಡು, ಸೆ. 12 (DaijiworldNews/AA): ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸುಶೀಲಾ ಕರ್ಕಿ ಅವರಿಗೆ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಅವರು ನೇಪಾಳ ದೇಶದ ಮೊದಲ ಮಹಿಳಾ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಹುದ್ದೆಗೆ ಸ್ಪರ್ಧಿಗಳೆಂದು ಪರಿಗಣಿಸಲಾಗಿದ್ದ ಕುಲ್ಮನ್ ಘಿಸಿಂಗ್ ಮತ್ತು ಸುಡಾನ್ ಗುರುಂಗ್ ಸೇರಿದಂತೆ ಅನೇಕ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ಕರ್ಕಿ ಅವರ ಮಧ್ಯಂತರ ಸಂಪುಟದಲ್ಲಿ ಯಾವುದೇ ಸಚಿವರನ್ನು ಸೇರಿಸಿಕೊಳ್ಳಲಾಗಿಲ್ಲ.