ಕಠ್ಮಂಡು, ಸೆ. 14 (DaijiworldNews/AA): ನಾನು ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ ತಿಳಿಸಿದ್ದಾರೆ.

ಹಂಗಾಮಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಹೊಸ ಸಂಸತ್ತಿಗೆ ಜವಾಬ್ದಾರಿಯನ್ನು ಹಸ್ತಾಂತರಿಸುತ್ತೇವೆ. ನಿಮ್ಮ ಬೆಂಬಲವಿಲ್ಲದೆ ನಾವು ಯಶಸ್ವಿಯಾಗುವುದಿಲ್ಲ. ಕೆ.ಪಿ.ಶರ್ಮಾ ಓಲಿ ಸರ್ಕಾರ ಉರುಳಿಸಿದ ಭ್ರಷ್ಟಾಚಾರದ ವಿರುದ್ಧ ರಾಷ್ಟ್ರವ್ಯಾಪಿ 'ಜೆನ್-ಝಡ್' ಪ್ರತಿಭಟನೆಗಳನ್ನು ಅವರು ಶ್ಲಾಘಿಸಿದರು.
"ಪ್ರತಿಭಟನೆಯಲ್ಲಿ ಕೊಲ್ಲಲ್ಪಟ್ಟವರನ್ನು 'ಹುತಾತ್ಮರು' ಎಂದು ಗುರುತಿಸಲಾಗುವುದು. ಪ್ರತಿ ಸಂತ್ರಸ್ತ ಕುಟುಂಬಗಳಿಗೆ 1 ಮಿಲಿಯನ್ ನೇಪಾಳಿ ರೂಪಾಯಿಗಳ ಪರಿಹಾರ ನೀಡಲಾಗುತ್ತದೆ" ಎಂದು ಘೋಷಣೆ ಮಾಡಿದರು.