ವಾಷಿಂಗ್ಟನ್, ಸೆ. 27 (DaijiworldNews/AA): ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗೆಹ್ಲೋಟ್ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಭಾರತ ತಕ್ಕ ಉತ್ತರ ನೀಡಿದೆ.

ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರೀಫ್ ಹೇಳಿದ್ದಾರೆ. ನಾನು ಪ್ರಧಾನಿ ಷರೀಫ್ ಅವರ ಭಾಷಣ ಕೇಳಿದೆ. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.
"ಶೆಹಬಾಜ್ ಷರೀಫ್ ನಿಜವಾಗಿಯೂ ಶಾಂತಿಯನ್ನು ಬಯಸಿದರೆ, ಪಾಕಿಸ್ತಾನ ತಕ್ಷಣವೇ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿ ಎಲ್ಲಾ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸಬೇಕು. ಈ ನಿಮ್ಮ ನಾಟಕಗಳಿಂದ ಸತ್ಯ ಬದಲಾಗೋದಿಲ್ಲ" ಎಂದು ಪೆಟಲ್ ಗಹ್ಲೋಟ್ ತಿಳಿಸಿದ್ದಾರೆ.
ಷರೀಫ್ ಅವರು ಮತ್ತೊಮ್ಮೆ ತಮ್ಮ ವಿದೇಶಾಂಗ ನೀತಿಯ ಭಾಗವಾದ ಭಯೋತ್ಪಾದನೆಯನ್ನು ವೈಭವೀಕರಿಸಿದರು. ಆದ್ರೆ ಯಾವುದೇ ಸುಳ್ಳು, ನಾಟಕಗಳು ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ಅಲ್ಲದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಹತ್ಯಾಕಾಂಡಕ್ಕೆ ಕಾರಣವಾದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಪಾಕಿಸ್ತಾನ ಸಮರ್ಥಿಸಿಕೊಂಡಿದೆ ಎಂದು ಕುಟುಕಿದರು.
ಒಂದು ಚಿತ್ರ ಸಾವಿರ ಪದಗಳನ್ನು ಹೇಳುತ್ತದೆ, ಮತ್ತು ಆಪರೇಷನ್ ಸಿಂಧೂರ್ ಸಮಯದಲ್ಲಿ ಬಹಾವಲ್ಪುರ್ ಮತ್ತು ಮುರಿಡ್ಕೆ ಭಯೋತ್ಪಾದಕ ಶಿಬಿರಗಳಲ್ಲಿ ಭಾರತೀಯ ಸೇನೆಯಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಹಲವಾರು ಛಾಯಾಚಿತ್ರಗಳನ್ನು ನಾವು ನೋಡಿದ್ದೇವೆ. ಪಾಕಿಸ್ತಾನವು ತಕ್ಷಣವೇ ಎಲ್ಲಾ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿ ಭಾರತದಲ್ಲಿ ಬೇಕಾಗಿರುವ ಭಯೋತ್ಪಾದಕರನ್ನು ಹಸ್ತಾಂತರಿಸಬೇಕು. ದ್ವೇಷ, ಧರ್ಮಾಂಧತೆ ಮತ್ತು ಅಸಹಿಷ್ಣುತೆಯನ್ನು ಪಾಲಿಸುವ ದೇಶವು ಈ ಸಭೆಗೆ ನಂಬಿಕೆಯ ವಿಷಯಗಳ ಬಗ್ಗೆ ಉಪದೇಶ ನೀಡುತ್ತಿರುವುದು ವಿಪರ್ಯಾಸ ಎಂದರು.