ಇಸ್ಲಾಮಾಬಾದ್, ಅ. 03 (DaijiworldNews/AA): ಬಾಂಬ್ ಸ್ಫೋಟದಿಂದ 9 ಜನರು ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.

ಪೇಶಾವರದ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, 'ಇದೊಂದು ಭಯೋತ್ಪಾದಕ ಕೃತ್ಯ. ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು ದಾಳಿಕೋರರನ್ನು ಹೊಡೆದುರುಳಿಸಿವೆ. ಭಯೋತ್ಪಾದಕರು ಹೇಡಿತನದ ಕೃತ್ಯಗಳ ಮೂಲಕ ರಾಷ್ಟ್ರದ ದೃಢಸಂಕಲ್ಪವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ' ಎಂದು ಈ ದಾಳಿಯನ್ನು ಖಂಡಿಸಿದ್ದಾರೆ.
ಇನ್ನು ಈ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದ್ದು, ಪೇಶಾವರ ಹಾಗೂ ಸುತ್ತಮುತ್ತ ನಡೆಯುವ ದಾಳಿಗಳಿಗೆ ಅಫ್ಘಾನಿಸ್ತಾನದ ಗಡಿಯ ಸಮೀಪವಿರುವ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರಗಾಮಿ ಗುಂಪುಗಳು ಕಾರಣ ಎನ್ನಲಾಗುತ್ತಿದೆ.