ರಿಯೊ ಡಿ ಜನೈರೊ, ಅ. 29 (DaijiworldNews/AA): ಬ್ರೆಜಿಲ್ನ ರಿಯೋ ನಗರದಲ್ಲಿ ನಡೆದ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 64 ಮಂದಿ ಮೃತಪಟ್ಟಿದ್ದಾರೆ.

ಕಾಂಪ್ಲೆಕ್ಸೊ ಡೊ ಅಲೆಮೊ ಮತ್ತು ಪೆನ್ಹಾ ಫಾವೆಲಾ ಸಂಕೀರ್ಣಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. 2,500 ಭದ್ರತಾ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ದಾಳಿಯ ವೇಳೆ ಗ್ಯಾಂಗ್ ಸದಸ್ಯರು ಭದ್ರತಾ ಸಿಬ್ಬಂದಿಗೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದರಿಂದ ಸಾವು ನೋವು ಹೆಚ್ಚಾಗಿದೆ. ಕಾರ್ಯಾಚರಣೆಯ ಬಳಿಕ ಅರಣ್ಯ ಪ್ರದೇಶಕ್ಕೆ ಶಸ್ತ್ರಸಜ್ಜಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಾವು ಮಾದಕವಸ್ತು-ಭಯೋತ್ಪಾದನೆಯನ್ನು ಎದುರಿಸುವಲ್ಲಿ ದೃಢವಾಗಿ ನಿಂತಿದ್ದೇವೆ ರಿಯೊ ಗವರ್ನರ್ ಕ್ಲಾಡಿಯೊ ಕ್ಯಾಸ್ಟ್ರೋ ಹೇಳಿದ್ದಾರೆ. ಒಂದು ವರ್ಷದ ಸುದೀರ್ಘ ತನಿಖೆಯ ಬಳಿಕ ಈ ದಾಳಿ ನಡೆಸಲಾಗಿದೆ. ಲಿಬರಲ್ ಪಕ್ಷದ ಗವರ್ನರ್ ಆಗಿರುವ ಕ್ಯಾಸ್ಟ್ರೋ, ಅಧ್ಯಕ್ಷ ಲೂಯಿಜ್ ಇನ್ಸಿಯೊ ಲುಲಾ ಡ ಸಿಲ್ವಾ ಅವರ ಸರ್ಕಾರ ಸ್ಥಳೀಯ ಅಪರಾಧಗಳನ್ನು ನಿಯಂತ್ರಿಸಲು ವಿಫಲವಾಗಿದೆ ಎಂದು ಎಂದು ರಿಯೋ ಆಡಳಿತ ತಿಳಿಸಿದೆ.